ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ‘ಯುವರತ್ನ’ ಸಿನಿಮಾ ಇಂದು ಅದ್ಧೂರಿ ಆರಂಭವಾಗಿದ್ದು, ಫಸ್ಟ್ ಶೋ ಹೌಸ್ ಫುಲ್ ಆಗಿದೆ. ಬೆಂಗಳೂರಿನಲ್ಲಿ ಬೆಳಗ್ಗೆ 6 ಗಂಟೆಗೆ ಫಸ್ಟ್ ಶೋ ಪ್ರಾರಂಭವಾಗಿದ್ದು, ಚಿತ್ರಮಂದಿರಗಳ ಎದುರು ಜಮಾಯಿಸಿದ ಪವರ್ ಸ್ಟಾರ್ ಅಭಿಮಾನಿಗಳು ಪಟಾಕಿ ಸಿಡಿಸಿ, ಕಟೌಟ್ ಗೆ ಹೂವಿನ ಹಾರ ಹಾಕಿ ಸಂಭ್ರಮಿಸಿದ್ದಾರೆ.
ಕೊರೊನಾ ಬಳಿಕ ಅತಿ ದೊಡ್ಡ ಬಜೆಟ್ ನಲ್ಲಿ ತೆರೆಗೆ ಬಂದಿರುವ ‘ಯುವರತ್ನ’ ಚಿತ್ರವನ್ನು ಅಭಿಮಾನಿಗಳು ಸಖತ್ ಆಗಿ ಸ್ವಾಗತಿಸಿದ್ದಾರೆ. ರಾಜ್ಯದಲ್ಲಿ ಸುಮಾರು 300 ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನವಾಗಲಿದ್ದು, ಬಾಕ್ಸ್ ಆಫೀಸ್ ದಾಖಲೆ ಮುರಿಯುವ ನಿರೀಕ್ಷೆಯಲ್ಲಿದೆ ಚಿತ್ರತಂಡ.