ಮಂಗಳೂರು: ಬೆಳ್ಳಾರೆಯಲ್ಲಿ ಪ್ರವೀಣ್ ಕೊಲೆಯ ಬೆನ್ನಲ್ಲೇ ಮಂಗಳೂರಿನ ಸುರತ್ಕಲ್ ಸಮೀಪ ಮುಸ್ಲಿಂ ಯುವಕನ ಕೊಲೆ ಯತ್ನ ನಡೆದಿದೆ ಎಂದು ತಿಳಿದು ಬಂದಿದೆ.

ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳು ಯುವಕನಿಗೆ ಹಿಗ್ಗಾಮುಗ್ಗಾ ದಾಳಿ ನಡೆಸಿದ್ದು, ಗಾಯಾಳು ಚಿಂತಾಜನಕ ಎನ್ನುವ ಮಾಹಿತಿ ಲಭ್ಯವಾಗಿದೆ.
ಮಂಗಲಪೇಟೆಯ ಫಾಜಿಲ್ ದಾಳಿಗೊಳಗಾದ ಯುವಕ ಎಂದು ಗುರುತಿಸಲಾಗಿದೆ.
ಇಂದು ಸಂಜೆ ವೇಳೆಯಲ್ಲಿ ಈ ಘಟನೆ ನಡೆದಿದ್ದು, ಯಾವ ಕಾರಣಕ್ಕೆ ಹಲ್ಲೆ ನಡೆದಿದೆ ಎಂದು ಇನ್ನಷ್ಟೇ ತಿಳಿದುಬರಬೇಕಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.


























