ಮಂಗಳೂರು: ಬೆಳ್ಳಾರೆಯಲ್ಲಿ ಪ್ರವೀಣ್ ಕೊಲೆಯ ಬೆನ್ನಲ್ಲೇ ಮಂಗಳೂರಿನ ಸುರತ್ಕಲ್ ಸಮೀಪ ಮುಸ್ಲಿಂ ಯುವಕನ ಮೇಲೆ ಮಾರಾಣಾಂತಿಕ ಹಲ್ಲೆ ನಡೆದಿದ್ದು, ಗಂಭೀರ ಗಾಯಗೊಂಡ ಯುವಕ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
ಸುರತ್ಕಲ್ ಮಂಗಲಪೇಟೆಯ ಫಾಜಿಲ್ ಕೊಲೆಯಾದ ಯುವಕ.

ಅಂಗಡಿಯ ಮುಂದೆ ನಿಂತಿದ್ದ ಫಾಜಿಲ್ ಮೇಲೆ ದುಷ್ಕರ್ಮಿಗಳು ಹಿಗ್ಗಾಮುಗ್ಗಾ ದಾಳಿ ನಡೆಸಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದ ಫಾಜಿಲ್ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಇಂದು ಸಂಜೆ ವೇಳೆಯಲ್ಲಿ ಈ ಘಟನೆ ನಡೆದಿದ್ದು, ಯಾವ ಕಾರಣಕ್ಕೆ ಹಲ್ಲೆ ನಡೆದಿದೆ ಎಂದು ಇನ್ನಷ್ಟೇ ತಿಳಿದು ಬರಬೇಕಾಗಿದೆ.



























