ಬೆಳ್ಳಾರೆ: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ
ಪ್ರವೀಣ್ ನೆಟ್ಟಾರು ರವರ ನಿವಾಸಕ್ಕೆ ಜು.30 ರಂದು ಮುಲ್ಕಿ-ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿ ಆರ್ಥಿಕ ಸಹಾಯಧನದ ಚೆಕ್ ಅನ್ನು ಹಸ್ತಾಂತರಿಸಿದರು.


ಈ ವೇಳೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಸಂಪ್ಯ ವಿಷ್ಣುಮೂರ್ತಿ ದೇವಾಲಯದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರಸನ್ನ ಕುಮಾರ್ ಮಾಡ್ತಾ, ಬೆಳ್ಳಾರೆ ಗ್ರಾ.ಪಂ ಅಧ್ಯಕ್ಷ ಚಂದ್ರಶೇಖರ್ ಪನ್ನೆ, ರಾಜ್ ಶೇಖರ್ ಮತ್ತಿತರರು ಉಪಸ್ಥಿತರಿದ್ದರು.




























