ಪುತ್ತೂರು: ನಗರ ಸಭಾ ವ್ಯಾಪ್ತಿಯ ಕೆಮ್ಮಿಂಜೆ ಗ್ರಾಮದ ಮೊಟ್ಟೆತಡ್ಕ ಪರಿಸರದಲ್ಲಿ ವಿದ್ಯುತ್ ಸಮಸ್ಯೆಯಾಗುತ್ತಿದ್ದು, ವಿದ್ಯುತ್ ಸಮಸ್ಯೆಯಿಂದಾಗಿ ಜನರಿಗೆ ಕುಡಿಯುವ ನೀರಿನ ತೊಂದರೆ ಆಗುತ್ತಿದ್ದು, ಹಲವು ದಿನಗಳಿಂದ ಈ ಸಮಸ್ಯೆ ಉಂಟಾಗಿರುತ್ತದೆ. ಇದನ್ನು ಕೂಡಲೇ ಸರಿಪಡಿಸಿ ಕೊಡಬೇಕೆಂದು ಮೆಸ್ಕಾಂ ಅಧಿಕಾರಿಗಳಿಗೆ ನಗರ ಕಾಂಗ್ರೆಸ್ ಅಧ್ಯಕ್ಷ ಎಚ್. ಮಹಮ್ಮದ್ ಅಲಿ ಹಾಗೂ ಸ್ಥಳೀಯ ವಾರ್ಡ್ ಸದಸ್ಯರಾದ ಶೈಲಾ ಪೈ ಆಗ್ರಹಿಸಿದರು.
ಈ ಕುರಿತು ಸಮಸ್ಯೆಗಳನ್ನು ಸರಿಪಡಿಸಲು ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ಮೆಸ್ಕಾಂ ನ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ರಾದ ರಾಮಚಂದ್ರ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.



























