ಪುತ್ತೂರು: ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ನಡೆಯುವ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು.
ಆಮಂತ್ರಣ ಪತ್ರವನ್ನು ಗೌರವ ಸಲಹೆಗಾರ ಅರುಣ್ ಕುಮಾರ್ ಪುತ್ತಿಲ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತಾಡಿದ ಅವರು, ಪ್ರತಿ ಹಿಂದೂ ಮನೆಗೂ ಆಮಂತ್ರಣ ಪತ್ರಿಕೆ ಮುಟ್ಟಿಸುವ ಕೆಲಸ ಕಾರ್ಯಕರ್ತರು ಮಾಡಿ ಈ ಗಣೇಶೋತ್ಸವ ಅತ್ಯಂತ ವಿಜೃಂಭಣೆಯಿಂದ ನಡೆಯಲು ಪ್ರತಿಯೊಬ್ಬರೂ ಸಹಕಾರ ನೀಡಬೇಕೆಂದರು. ಅದಕ್ಕೆ ಪೂರ್ವಭಾವಿಯಾಗಿ ನಡೆಯುವ ಕ್ರೀಡಾಕೂಟ ಕೂಡ ಯಶಸ್ವಿಯಾಗಿ ನಡೆಯಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಶುಭ ಹಾರೈಸಿದರು.

ಈ ವೇಳೆ ಗೌರವಾಧ್ಯಕ್ಷ ಸುಧೀರ್ ಶೆಟ್ಟಿ, ಅಧ್ಯಕ್ಷ ಪ್ರಶಾಂತ್ ಆಚಾರ್ಯ, ಕಾರ್ಯಾಧ್ಯಕ್ಷ ರಾಘವೇಂದ್ರ, ಪ್ರಧಾನಕಾರ್ಯದರ್ಶಿ ಸಚಿನ್ ಪಟ್ಟೆ, ಗೌರವ ಸಲಹೆಗಾರರಾದ ಜಯಪ್ರಸಾದ್, ಧನಂಜಯ, ಉಮೇಶ್ ಗುತ್ತಿನಪಾಲು, ಹರೀಶ್ ಬಿಕೆ ಉಪಸ್ಥಿತರಿದ್ದರು. ದೇವಸ್ಥಾನದ ಅರ್ಚಕರಾದ ಪ್ರಸಾದ್ ಬೈಪಾಡಿತ್ತಾಯ ಪ್ರಾರ್ಥನೆ ಮಾಡಿ ಪ್ರಸಾದ ನೀಡಿದರು.



























