ಮಂಗಳೂರು: ಇತ್ತೀಚೆಗೆ ದುಷ್ಕರ್ಮಿಗಳ ದಾಳಿಗೆ ಮೃತಪಟ್ಟ ಬಿಜೆಪಿ ಯುವಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಮನೆಗೆ ಇಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ಈ ವೇಳೆ ಸಚಿವೆ ಕುಟುಂಬಕ್ಕೆ 5 ಲಕ್ಷ ರೂ. ನಗದು ಪರಿಹಾರ ನೀಡಿದರು. ಅಲ್ಲದೆ ಒಂದು ತಿಂಗಳ ಸಂಬಳ ನೀಡುವುದಾಗಿ ಘೋಷಣೆ ಮಾಡಿದರು. ಇದೇ ವೇಳೆ ಹಲವಾರು ಕಾರ್ಯಕರ್ತರ ಚೆಕ್ ವಿತರಣೆಯನ್ನು ಕೂಡ ಶೋಭಾ ಕರಂದ್ಲಾಜೆ ಮಾಡಿದರು. ಪ್ರವೀಣ್ ಸಾವಿಗೆ ನ್ಯಾಯ ಒದಗಿಸಬೇಕೆಂದು ಈ ಸಂದರ್ಭದಲ್ಲಿ ಸಚಿವೆ ಮುಂದೆ ಕುಟುಂಬಸ್ಥರು ಕಣ್ಣೀರಿಟ್ಟರು.



























