ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆಯ ಕೋರಿಕೆಯ ಮೇಲೆ ಮತ್ತೆ ಎರಡು ದಿನಗಳ ಕಾಲ ಜಿಲ್ಲಾಡಳಿತ ನಿರ್ಬಂಧ ಹೇರಿದ್ದು, ಆಗಸ್ಟ್ 3ರ ಬೆಳ್ಳಗ್ಗಿನವರೆಗೆ ನಿರ್ಬಂಧ ಜಾರಿಯಲ್ಲಿರಲಿದೆ.
ಬೆಳ್ಳಾರೆ ಮತ್ತು ಸುರತ್ಕಲ್‌ನಲ್ಲಿ ನಡೆದ ಕೊಲೆ ಕೃತ್ಯದ ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ತುರ್ತು ಸೇವೆಯನ್ನು ಹೊರತುಪಡಿಸಿ ಇತರ ಚಟುವಟಿಕೆಗಳಿಗೆ ಜುಲೈ 29ರ ಸಂಜೆ 6 ಗಂಟೆಯಿಂದ ಆಗಸ್ಟ್ 1ರ ಮುಂಜಾನೆ 6 ರವರೆಗೆ ಅಂಗಡಿ-ಮುಂಗಟ್ಟು ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದರು.
ಇದೀಗ ಪೊಲೀಸ್ ಇಲಾಖೆಯ ಕೋರಿಕೆಯ ಮೇಲೆ ಮತ್ತೆ ಎರಡು ದಿನಗಳ ಕಾಲ ಜಿಲ್ಲಾಡಳಿತ ನಿರ್ಬಂಧ ಹೇರಿದ್ದು, ಆಗಸ್ಟ್ 3ರ ಬೆಳ್ಳಗ್ಗಿನವರೆಗೆ ನಿರ್ಬಂಧ ಜಾರಿಯಲ್ಲಿರಲಿದೆ.


























