ಬೆಂಗಳೂರು: ರಾಜ್ಯವನ್ನೇ ಬೆಚ್ಚಿ ಬೀಳಿಸಿರೋ ಪ್ರವೀಣ್
ನೆಟ್ಟಾರು ಹತ್ಯೆ ಕೇಸ್‌ಗೆ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಬಂಧಿತ
ಇಬ್ಬರು ನೀಡಿರೋ ಮಾಹಿತಿ ಅನ್ವಯ ಬೆಂಗಳೂರಲ್ಲಿ ಕಾರ್ಯಾಚರಣೆ ನಡೆದಿದ್ದು, ಇಬ್ಬರನ್ನು ವಶಕ್ಕೆ ಪಡೆದಿರೋ ಪೊಲೀಸರು ವಿಚಾರಣೆ ನಡೆಸ್ತಿದ್ದಾರೆ ಎಂದು ತಿಳಿದು ಬಂದಿದೆ.
ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಕೇಸ್‌ಗೆ ಮಹತ್ವದ ಟ್ವಿಸ್ಟ್ ಸಿಕ್ಕಿದ್ದು, ಇದುವರೆಗೆ ಕೇವಲ ಇಬ್ಬರನ್ನು ಬಂಧಿಸಿದ್ದ ಪೊಲೀಸರು ಪ್ರಕರಣ ಸಂಬಂಧ ಮತ್ತಿಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧಿತ ಶಫೀಕ್ ಹಾಗೂ ಜಾಕೀರ್‌ನನ್ನು ಪೊಲೀಸರು ಸರಿಯಾಗಿ ವಿಚಾರಣೆ ನಡೆಸಿದ ಕಾರಣ ಸ್ಫೋಟಕ ಮಾಹಿತಿ ಬಾಯಿಬಿಟ್ಟಿದ್ದಾರೆ. ಬಂಧಿತ ಇಬ್ಬರು ಕೊಟ್ಟ ಮಾಹಿತಿ ಪ್ರಕಾರ ಸುಳ್ಯ ಠಾಣೆ ಪೊಲೀಸರು
ಕಾರ್ಯಾಚರಣೆ ನಡೆಸಿದ್ದಾರೆ. ಅದ್ರಲ್ಲೂ ಬೆಂಗಳೂರಲ್ಲಿ
ಅಡಗಿ ಕೂತಿದ್ದ ಇಬ್ಬರನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳದಲ್ಲಿ
ವಿಚಾರಣೆ ಶುರು ಮಾಡಿದ್ದಾರೆ ಎಂದು ವರದಿಯಾಗಿದೆ.
ಶಫೀಕ್, ಜಾಕೀರ್ ಕೊಟ್ಟ ಮಾಹಿತಿ ಆಧರಿಸಿ ಸೀಕ್ರೆಟ್ ಆಪರೇಷನ್ ನಡೆಸಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಶಫೀಕ್ ಹಾಗೂ ಜಾಕೀರ್ ಕೊಟ್ಟ ಮಾಹಿತಿಯಂತೆ ಇಬ್ಬರನ್ನು ಪೊಲೀಸರು ಲಾಕ್ ಮಾಡಿದ್ದಾರೆ. ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ಬೆಂಗಳೂರಿಗೆ ಬಂದಿದ್ದ ಆರೋಪಿಗಳ ಬಗ್ಗೆ ಹಿರಿಯ ಐಪಿಎಸ್ ಅಧಿಕಾರಿಗಳು ಮಹತ್ವದ ಮಾಹಿತಿ ಕಲೆ ಹಾಕಿದ್ದರು. ಈ ಮಾಹಿತಿ ಎಲ್ಲೂ ಸೋರಿಕೆಯಾಗದಂತೆ ಮುಂಜಾಗ್ರತೆ ವಹಿಸಿ ಕಾರ್ಯಾಚರಣೆ ಮಾಡಲಾಗಿದೆ. ಈ ಕಾರ್ಯಾಚರಣೆ ವೇಳೆ ಸುಳ್ಯ ಪೊಲೀಸರಿಗೆ ಬೆಂಗಳೂರು ಪೊಲೀಸರು ಕೂಡಾ ಸಾಥ್ ನೀಡಿದ್ದಾರೆ ಎನ್ನಲಾಗಿದೆ.


























