ಸುಬ್ರಹ್ಮಣ್ಯ: ಪರಿಸರದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಭಾರಿ ಅನಾಹುತ ಸಂಭವಿಸಿದೆ.

ಸುಬ್ರಹ್ಮಣ್ಯದ ಕುಮಾರಧಾರ ಬಳಿಯಲ್ಲಿ ಗುಡ್ಡ ಜರಿದು ಮನೆಯೊಂದು ಕುಸಿದು ಬಿದ್ದಿದ್ದು, ಮನೆಯೊಳಗಿನ ಇಬ್ಬರು ಮಕ್ಕಳು ಮಣ್ಣಲ್ಲಿ ಹೂತು ಹೋಗಿದ್ದಾರೆ.
ಶ್ರುತಿ(11), ಜ್ಞಾನಶ್ರೀ(6) ಮಣ್ಣಿನಡಿ ಸಿಲುಕಿರುವ ಮಕ್ಕಳು.

ಕುಸುಮಾಧರ ಎಂಬವರ ಮನೆ ಕುಸಿತಗೊಂಡಿದ್ದು, ಮನೆಯಲ್ಲಿ ಇಬ್ಬರು ಮಕ್ಕಳು, ಅಪ್ಪ, ಅಮ್ಮ, ಅಜ್ಜಿ ಇದ್ದು, ಮಕ್ಕಳು ಮಣ್ಣಿನಡಿ ಸಿಲುಕಿದ್ದು,ಅಮ್ಮ, ಅಪ್ಪ ಅಂಗಡಿಯಲ್ಲಿದ್ದರು. ಸದ್ಯ ಅಜ್ಜಿ ಅಪಾಯದಿಂದ ಪಾರಾಗಿದ್ದು, ಸಣ್ಣ ಪುಟ್ಟ ಗಾಯಗಳಾಗಿದೆ. ಮಕ್ಕಳು ಮಣ್ಣಿನ ಅಡಿಯಲ್ಲಿ ಹೂತು ಹೋಗಿದ್ದಾರೆ.
ಸುಬ್ರಹ್ಮಣ್ಯ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಜೆಸಿಬಿ ಮೂಲಕ ಕಾರ್ಯಾಚರಣೆ ನಡೆಸಿ, ಮಕ್ಕಳನ್ನು ಮಣ್ಣಿನಡಿಯಿಂದ ಹೊರತೆಗೆಯುವ ಪ್ರಯತ್ನ ನಡೆಸಲಾಗುತ್ತಿದೆ.

ಆದರೇ ಕುಮಾರಧಾರದಿಂದ ಪಂಜ ಕಡೆಗೆ ಹೋಗುವ ರಸ್ತೆ ನೆರೆ ನೀರಲ್ಲಿ ಪೂರ್ಣ ಮುಳುಗಿರುವುದರಿಂದ ಮತ್ತು ಮರ ಕೂಡ ಬಿದ್ದಿರುವುದರಿಂದ ರಸ್ತೆ ಬಂದ್ ಆಗಿದ್ದು, ಪರಿಹಾರ ಕಾರ್ಯಕ್ಕೆ
ತೊಂದರೆ ಉಂಟಾಗುತ್ತಿದೆ..




























