ಉಪ್ಪಿನಂಗಡಿ: ಕಾರು ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಕಡಬ ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ನಡೆದಿದೆ.

ಹಾಸನ ಜಿಲ್ಲೆಯ ಸಕಲೇಶಪುರದಿಂದ ಕಡಬ ತಾಲೂಕಿನ ರಾಮಕುಂಜಕ್ಕೆ ಬರುತ್ತಿದ್ದ ಕಾರು ಮತ್ತು ಮಂಗಳೂರಿನಿಂದ ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮಧ್ಯೆ ಅಪಘಾತ ಸಂಭವಿಸಿದೆ.
ಘಟನೆಯಿಂದಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ರಾಮಕುಂಜ ನಿವಾಸಿಗಳಾದ ಉಪನ್ಯಾಸಕ ಗೋವಿಂದರಾಜ್ ಶರ್ಮಾ ಮತ್ತು ಓಂಕಾರ್ ಪ್ರಸಾದ್ ಗಾಯ ಗೊಂಡಿದ್ದಾರೆ ಎಂದು ತಿಳಿದು ಬಂದಿದೆ.



























