ಪುತ್ತೂರು: ಅಕ್ಷಯ ಎಜ್ಯುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್(ರಿ) ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸಂಪ್ಯ ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಕಾರ್ಯಕ್ರಮದಡಿಯಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ ಮಾಡಲಾಯಿತು.
ಕಾರ್ಯಕ್ರಮವನ್ನು ದೀಪಪ್ರಜ್ವಲನ ಮಾಡಿ, ಭಾರತಾಂಬೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಲಾಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ನಿವೃತ್ತ ಕಾರ್ಗಿಲ್ ಯೋಧರಾದ ಕೆ.ಸುಂದರ್ ಗೌಡ ರವರನ್ನು ಸನ್ಮಾನಿಸಲಾಯಿತು. ಬಳಿಕ ಮಾತನಾಡಿದ ಅವರು ಕಾರ್ಗಿಲ್ ನಲ್ಲಿ ನಡೆದಂತಹ ಘಟನೆಗಳ ಬಗ್ಗೆ ತಿಳಿಸಿ ಮಿಲಿಟರಿಯಲ್ಲಿರುವ ವಿವಿಧ ಅವಕಾಶಗಳ ಬಗ್ಗೆ ವಿವರಿಸಿ ವಿದ್ಯಾರ್ಥಿಗಳಿಗೆ ಸೇನೆಗೆ ಸೇರಲು ಹುರಿದುಂಬಿಸಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಅಧ್ಯಕ್ಷರಾದ ಜಯಂತ್ ನಡುಬೈಲು ರವರು ಮಾತನಾಡಿ, ವಿದ್ಯಾರ್ಥಿಗಳು ಯಾವ ರೀತಿ ಶಿಸ್ತು ಪಾಲನೆ ಮಾಡಬೇಕು ಎಂಬುದನ್ನು ನಮ್ಮ ಯೋಧರಿಂದ ತಿಳಿಯಬಹುದು. ನಾವು ಇಂದು ಸಮಾಜದಲ್ಲಿ ನೆಮ್ಮದಿಯಾಗಿ ಬದುಕಲು ಅವರ ನಿಶ್ಕಲ್ಮಶ ಸೇವೆಯೇ ಕಾರಣ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್ ನಾಯಕ ಗಗನ್‌ದೀಪ್ ಸ್ವಾಗತಿಸಿ, ವಿದ್ಯಾರ್ಥಿ ಗೌತಮ್ ಆರ್ ಸುವರ್ಣ ವಂದಿಸಿದರು. ಎನ್.ಎಸ್.ಎಸ್ ನಾಯಕಿ ಪ್ರಣಮ್ಯ ಅತಿಥಿಗಳನ್ನು ಪರಿಚಯಿಸಿದರು. ಸಮಾರಂಭದಲ್ಲಿ ಗವರ್ನಿಂಗ್ ಕೌನ್ಸಿಲ್ ಸದಸ್ಯರಾದ ನಾರಾಯಣನ್, ಪ್ರಾಂಶುಪಾಲರಾದ ಸಂಪತ್ ಕೆ ಪಕ್ಕಳ, ಆಡಳಿತಾಧಿಕಾರಿ ಅರ್ಪಿತ್ ಟಿ.ಎ, ಬೋಧಕ ಹಾಗೂ ಬೋಧಕಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಪ್ರಥಮ ಬಿ.ಕಾಂ ವಿದ್ಯಾರ್ಥಿನಿ ಸಾಕ್ಷಿ ಎಂ ನಿರೂಪಿಸಿದರು.