ಕಡಬ: ವಿವಾಹಿತ ಮಹಿಳೆಯೋರ್ವಳನ್ನು ಅತ್ಯಾಚಾರಗೈದು ಮದುವೆಯಾಗುತ್ತೇನೆಂದು ನಂಬಿಸಿ 1.70 ಲಕ್ಷ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂತ್ರಸ್ತ ಮಹಿಳೆಯು ತನ್ನ ಮಕ್ಕಳೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಮೇ.20 ರಂದು ರಾತ್ರಿ 10 ಗಂಟೆಗೆ ಪವನ್ ಎಂಬಾತ ಮದ್ಯಪಾನ ಮಾಡಿಕೊಂಡು ಮಹಿಳೆಯನ್ನು
ಅತ್ಯಾಚಾರಗೈದಿದ್ದಾನೆ.
ಈ ಬಗ್ಗೆ ಮಹಿಳೆ ಪೊಲೀಸ್ ಠಾಣೆಗೆ ದೂರು ನೀಡುತ್ತೇನೆ ಎಂದು ತಿಳಿಸಿದಾಗ ನಾನು ನಿನ್ನನ್ನು ಮದುವೆಯಾಗುತ್ತೇನೆ. ಪೊಲೀಸ್ ಕಂಪ್ಲೇಟ್ ಮಾಡಬೇಡ ಎಂದು ಹೇಳಿ ವಕೀಲರ ಮುಖಾಂತರ ಲಿಖಿತ ಒಪ್ಪಿಗೆ ನೀಡಿದ್ದನು. ಜೊತೆಗೆ ಇದಕ್ಕಾಗಿ ಮಹಿಳೆಯ ಕೈಯಿಂದ 1,70,000 ರೂಪಾಯಿ ಹಣವನ್ನು ಪಡೆದುಕೊಂಡು ಈಗ ಮದುವೆಯಾಗುವುದಿಲ್ಲ ಎಂದು ವಂಚನೆ ಮಾಡಿದ್ದಾಗಿ ಮಹಿಳೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.
ಮಹಿಳೆ ನೀಡಿದ ದೂರಿನ್ವಯ ಯುವಕನ ಮೇಲೆ ಪ್ರಕರಣ ದಾಖಲಾಗಿದೆ.