ಉಪ್ಪಿನಂಗಡಿ: ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ವ್ರತವನ್ನು ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮಾದಾಯ ಧತ್ತಿ ಮುಜರಾಯಿ ಇಲಾಖೆ ವತಿಯಿಂದ ವಿಶೇಷವಾಗಿ ಆಚರಿಸಲಾಯಿತು.

ಮುಜರಾಯಿ ವ್ಯಾಪ್ತಿಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆಯನ್ನು ನೆರವೇರಿಸಿ, ದೇವಾಲಯಗಳಿಗೆ ಆಗಮಿಸುವ ಮಹಿಳೆಯರಿಗೆ ಉತ್ತಮ ಗುಣಮಟ್ಟದ ಕಸ್ತೂರಿ ಅರಿಶಿಣ-ಕುಂಕುಮ ಮತ್ತು ಹಸಿರು ಬಳೆಗಳನ್ನು ಗೌರವ ಸೂಚಕವಾಗಿ ನೀಡುವಂತೆ ಸಚಿವೆ ಶಶಿಕಲಾ ಜೊಲ್ಲೆ ರವರು ನಿರ್ದೇಶನ ನೀಡಿದ್ದು, ಈ ಹಿನ್ನೆಲೆ ಇಂದು ಉಪ್ಪಿನಂಗಡಿ ಶ್ರೀಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದಲ್ಲಿ ಮಹಿಳೆಯರಿಗೆ ಪುತ್ತೂರು ಶಾಸಕರಾದ ಸಂಜೀವ ಮಠಂದೂರು ರವರು ಕಸ್ತೂರಿ ಅರಿಶಿಣ-ಕುಂಕುಮ ಮತ್ತು ಹಸಿರು ಬಳೆಗಳನ್ನು ವಿತರಿಸಿದರು.
