ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ. ವಿ. ರವರು ಆ.5 ರಂದು ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ರಾಜ್ಯ ಯುವ ಮೋರ್ಚಾ ವಿಶೇಷ ಸಭೆ ನಡೆಸಿದರು.

ಸಭೆಯಲ್ಲಿ ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ದಕ್ಷಿಣ ಕನ್ನಡ ಜಿಲ್ಲಾ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಪ್ರವೀಣ್ ನೆಟ್ಟಾರು ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಮೌನ ಪ್ರಾರ್ಥನೆ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಯುವ ಮೋರ್ಚಾ ಪ್ರಭಾರಿ ಮಹೇಶ್ ಟೆಂಗಿನಕಾಯಿ, ಯುವ ಮೋರ್ಚಾ ರಾಜ್ಯ ಅಧ್ಯಕ್ಷರಾದ ಡಾ.ಸಂದೀಪ್ ಕುಮಾರ್, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಡಾ. ಮಲ್ಲಿಕಾರ್ಜುನ ಬಾಳಿಕಾಯಿ, ಅಜಿತ್ ಹೆಗಡೆ ಬೆಳ್ಳೆಕೇರಿ ಮತ್ತು ಯುವ ಮೋರ್ಚಾ ರಾಜ್ಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
