ಮಂಗಳೂರು: ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ್ಟೇಬಲ್ ರೋರ್ವರು ಅಸ್ವಸ್ಥರಾಗಿ ಆಸ್ಪತ್ರೆ ದಾಖಲಿಸಿದ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಆ.6 ರಂದು ಕೊಣಾಜೆಯಲ್ಲಿ ನಡೆದಿದೆ.

ಮೃತರನ್ನು ಪುತ್ತೂರು ತಾಲೂಕು ಸವಣೂರು ಗ್ರಾಮದ ಪ್ರಸ್ತುತ ಕೊಣಾಜೆ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಜಗನ್ನಾಥ್(44) ಎಂದು ಗುರುತಿಸಲಾಗಿದೆ.
ಜಗನ್ನಾಥ್ ರವರು ಇಂದು ಕರ್ತವ್ಯದಲ್ಲಿದ್ದ ವೇಳೆ ಅಸ್ವಸ್ಥರಾಗಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

























