ಪುತ್ತೂರು: ಕೆಲ ದಿನಗಳ ಹಿಂದೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ರವರ ಉತ್ತರಕ್ರಿಯೆ ಆ.6 ರಂದು ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.

ಸಹಸ್ರಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿರಿಸಲಾಗಿದ್ದ ಪ್ರವೀಣ್ ರವರ ಭಾವಚಿತ್ರಕ್ಕೆ ಕುಟುಂಬಸ್ಥರು ಹಾಗೂ ಹಲವು ಪ್ರಮುಖರು ಪುಷ್ಪ ನಮನ ಸಲ್ಲಿಸಿ, ನುಡಿ ನಮನಗೈದರು.



ಜು.26 ರಂದು ರಾತ್ರಿ ಬೆಳ್ಳಾರೆ ಚಿಕನ್ ಸೆಂಟರ್ ಬಳಿ ಪ್ರವೀಣ್ ರವರನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದು, ಜು.27 ರಂದು ಅಂತ್ಯಕ್ರಿಯೆ ನಡೆಸಲಾಗಿತ್ತು.

ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲದೇ ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ್ದು, ಬಿಜೆಪಿ ವಿರುದ್ಧ ಕಾರ್ಯಕರ್ತರು ಸಿಡಿದೆದ್ದಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾಲ್ವರನ್ನು ಬಂಧಿಸಲಾಗಿದ್ದು, ಪ್ರವೀಣ್ ರವರನ್ನು ಹತ್ಯೆಗೈದ ಪ್ರಮುಖ ಆರೋಪಿಗಳ ಬಂಧನ ಇನ್ನಷ್ಟೇ ಆಗಬೇಕಿದೆ., ಪೊಲೀಸರು ತೀವ್ರ ಗತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ.




























