ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪೊಲೀಸರು ಮತ್ತಿಬ್ಬರನ್ನು ಬಂಧಿಸಿದ್ದಾರೆ.
ಸುಳ್ಯ ನಾವೂರು ನಿವಾಸಿ ಅಬೀದ್(22), ಬೆಳ್ಳಾರೆ ಗೌರಿಹೊಳೆ ನಿವಾಸಿ ನೌಫಲ್(28) ಬಂಧಿತರು.
ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ನಾಲ್ವರನ್ನು ಬಂಧಿಸಿದ್ದು, ಇದೀಗ ಮತ್ತಿಬ್ಬರನ್ನು ಬಂಧಿಸಲಾಗಿದ್ದು, ಈ ಹಿನ್ನೆಲೆ ಬಂಧಿತರ ಸಂಖ್ಯೆ 6ಕ್ಕೇರಿದೆ.
ಜು.26 ರಂದು ರಾತ್ರಿ ಬೆಳ್ಳಾರೆ ಚಿಕನ್ ಸೆಂಟರ್ ಬಳಿ ಪ್ರವೀಣ್ ರವರನ್ನು ಹತ್ಯೆ ಮಾಡಲಾಗಿದ್ದು, ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲದೇ ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿತ್ತು..

























