ವಿಟ್ಲ: ಓವರ್ ಟೇಕ್ ಮಾಡುವ ವೇಳೆ ಜೀಪ್ ಗೆ ಆಕ್ಟಿವಾ ಡಿಕ್ಕಿ ಹೊಡೆದ ಘಟನೆ ವಿಟ್ಲ ಕಾಸರಗೋಡು ಹೆದ್ದಾರಿಯ ಉಕ್ಕುಡ ಚೆಕ್ ಪೋಸ್ಟ್ ಬಳಿ ನಡೆದಿದೆ.

ಅಪಘಾತದಿಂದಾಗಿ ದ್ವಿಚಕ್ರ ವಾಹನ ಸವಾರ ದಿನೇಶ್ ಎಂಬವರು ಗಾಯಗೊಂಡಿದ್ದು, ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಓವರ್ ಟೇಕ್ ಮಾಡುವ ಭರದಲ್ಲಿ ಹೋಂಡಾ ಆಕ್ಟಿವಾ ಜೀಪ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.



























