ಉಪ್ಪಿನಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಪಕರಾದ ಶೇಖರ ಎಂ.ಬಿ. ರವರು ತುಳು ಭಾಷೆಯ ಬಗ್ಗೆ ಅವಾಚ್ಯವಾಗಿ ಮಾತನಾಡಿದ್ದಾರೆಂದು ಆರೋಪಿಸಿ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಆ.5 ಮತ್ತು ಆ.8ರಂದು ಉಪ್ಪಿನಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ವತಿಯಿಂದ ಕಾಲೇಜಿನಲ್ಲಿ ತುಳುನಾಡ ಐಸಿರಿ ಕಾರ್ಯಕ್ರಮ ನಡೆದಿತ್ತು.
ಈ ಸಂದರ್ಭ ಕಾಲೇಜಿನ ಪ್ರಾಧ್ಯಾಪಕರಾದ ಶೇಖರ ಎಂ.ಬಿ. ರವರು ತುಳು ಭಾಷೆಯ ಬಗ್ಗೆ ಅವಾಚ್ಯವಾಗಿ ಮಾತನಾಡಿದ್ದಾರೆನ್ನಲಾಗಿದೆ. ಈ ಬಗ್ಗೆ ಆಕ್ರೋಶಗೊಂಡ ವಿದ್ಯಾರ್ಥಿಗಳು ಕಾಲೇಜಿನ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
























