ಶ್ರೀನಗರ: ಜಮ್ಮುಕಾಶ್ಮೀರದ ಪುಲ್ವಾಮ ಜಿಲ್ಲೆಯ ಕಾಕ್ ಪೋರಾದಲ್ಲಿ ಭದ್ರತಾ ಪಡೆ ಹಾಗೂ ಭಯೋತ್ಪಾದಕರ ನಡುವೆ ಗುಂಡಿನ ದಾಳಿ ನಡೆದಿದೆ.ದಾಳಿಯಲ್ಲಿ ಮೂವರು ಉಗ್ರರು ಭಾರತೀಯ ಸೇನೆಯ ಗುಂಡಿಗೆ ಬಲಿಯಾಗಿದ್ದಾರೆ. ಇಬ್ಬರು ಉಗ್ರರ ಬಂಧನವಾಗಿದೆ. ಉಗ್ರರು ಭಾರತೀಯ ಸೇನೆಯ ಮೇಲೆ ಗುಂಡು ಹಾರಿಸಿದ ನಂತರವೇ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದೆ. ಶುಕ್ರವಾರ ಬೆಳ್ಳಂಬೆಳಗ್ಗೆ ಪುಲ್ವಾಮಾದಲ್ಲಿ ಈ ಘಟನೆ ನಡೆದಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.