ಸುಳ್ಯ: ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ವತಿಯಿಂದ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಭಾರತೀಯ ಜನತಾ ಪಾರ್ಟಿಯ ಯುವಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ರವರಿಗೆ ನುಡಿನಮನ ಕಾರ್ಯಕ್ರಮ ಆ.14 ರಂದು ಜೆ.ಡಿ. ಆಡಿಟೋರಿಯಂ ಪೆರುವಾಜೆಯಲ್ಲಿ ನಡೆಯಲಿದೆ.
ಪ್ರವೀಣ್ ನೆಟ್ಟಾರು ರವರ ಆತ್ಮ ಸದ್ಗತಿಗಾಗಿ ಆ.14 ಬೆಳಿಗ್ಗೆ 10 ಗಂಟೆಯಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಭಾರತೀಯ ಜನತಾ ಪಾರ್ಟಿಯ ಜನಪ್ರತಿನಿಧಿಗಳು, ಮುಖಂಡರು, ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


























