ವಿಟ್ಲ: ಜೋಕಾಲಿಯ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕಿ ಸಾವನ್ನಪ್ಪಿದ ಘಟನೆ ಅನಂತಾಡಿಯಲ್ಲಿ ನಡೆದಿದೆ.
ಬಾಬನಕಟ್ಟೆ ಶಾಲೆಯ ಆರನೇ ತರಗತಿ ವಿದ್ಯಾರ್ಥಿನಿ ಲಿಖಿತಾ(11)ಮೃತ ಬಾಲಕಿ.
ಮನೆಯಲ್ಲಿ ಆಟವಾಡುತ್ತಿದ್ದ ವೇಳೆ ಜೋಕಾಲಿಗೆ ಕಟ್ಟಿದ್ದ ಹಗ್ಗ ಸಿಲುಕಿ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ವರದಿಯಾಗಿದೆ.
ಮೃತ ಬಾಲಕಿ ತಂದೆ-ತಾಯಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.