ಮಳೆಯ ಕಣ್ಣಾಮುಚ್ಚಾಲೆಯ ನಡುವೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೈರಲ್ ಜ್ವರ ಮತ್ತು ದೇಹದ ಮೇಲೆ ಗುಳ್ಳೆ ಕಾಣಿಸಿಕೊಳ್ಳುವ ಪ್ರಕರಣ ಹೆಚ್ಚಾಗುತ್ತಿದ್ದು ಎಚ್ಚರವಹಿಸಲು ಅರೋಗ್ಯ ಇಲಾಖೆ ಸೂಚಿಸಿದೆ.
ಮಕ್ಕಳಲ್ಲಿ ಹೆಚ್ಚಾಗಿ ಈ ಪ್ರಕರಣ ವರದಿಯಾಗುತ್ತಿದೆ. ಮಕ್ಕಳು ಗುಣಮುಖವಾಗುವವರೆಗೆ ಮನೆಯಲ್ಲೇ ಇರಬೇಕು, ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಿಶೋರ್ ಕುಮಾರ್ ಸೂಚನೆ ನೀಡಿದ್ದಾರೆ
ವೈರಲ್ ಜ್ವರ, ದೇಹದ ಮೇಲೆ ಗುಳ್ಳೆಗಳು ಸಾಂಕ್ರಾಮಿಕವಾಗಿರುವುದರಿಂದ ಮಕ್ಕಳು ಶಾಲೆಗೆ ಬರದಂತೆ ನೋಡಿಕೊಳ್ಳಬೇಕು. ಇವು ಕೆಲವು ದಿನಗಳಲ್ಲಿ ಗುಣವಾಗುತ್ತದೆ. ಗಾಬರಿಪಡುವ ಆವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.