ಬಂಟ್ವಾಳ: ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ವಿದ್ಯಾರ್ಥಿಯೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬರಿಮಾರು ಗ್ರಾಮದ ಕಾಗೆಕಾನ ಎಂಬಲ್ಲಿ ನಡೆದಿದೆ.
ಬರಿಮಾರು ಗ್ರಾಮದ ಪಾಪೆತ್ತಿಮಾರು ನಿವಾಸಿ ರಕ್ಷಣ್ (16) ಮೃತ ವಿದ್ಯಾರ್ಥಿ.

ರಕ್ಷಣ್ ಸ್ಥಳೀಯ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದು, ಕಾಲೇಜ್ ಗೆ ರಜೆ ಇದ್ದ ಹಿನ್ನೆಲೆಯಲ್ಲಿ ನೇತ್ರಾವತಿ ನದಿ ಬಳಿಗೆ ಹೋಗಿದ್ದಾಗ ಈ ಘಟನೆ ಸಂಭವಿಸಿದೆ.
ನೀರಿಗೆ ಬಿದ್ದ ವಿಚಾರ ತಿಳಿದು ಸ್ಥಳೀಯರು ಮತ್ತು ಅಗ್ನಿ ಶಾಮಕದಳ ದವರು ವಿದ್ಯಾರ್ಥಿಯನ್ನು ಮೇಲಕ್ಕೆತ್ತಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಆತನನ್ನು ಆಂಬ್ಯುಲೆನ್ಸ್ ನಲ್ಲಿ ಕಲ್ಲಡ್ಕ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಬಳಿಕ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ತುಂಬೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.