ಅರಿಯಡ್ಕ : ಜೀರ್ಣೋದ್ಧಾರಗೊಳ್ಳುತ್ತಿರುವ ಕೌಡಿಚ್ಚಾರು ಶ್ರೀಕೃಷ್ಣ ಭಜನಾ ಮಂದಿರದ ವಿಜ್ಞಾಪನಾ ಪತ್ರವನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಭಜನಾ ಮಂದಿರದ ಸಮಿತಿ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಸನ್ಮಾನಿಸಿ ಗೌರವಿಸಿದರು.
ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ನಿರ್ದೇಶಕ ಹಾಗೂ ಭಜನಾ ಮಂದಿರದ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಶಶಿಕುಮಾರ್ ಬಾಲ್ಯೊಟ್ಟು, ಅಧ್ಯಕ್ಷ ವಾಸು ಪೂಜಾರಿ ಗುಂಡ್ಯಡ್ಕ, ಭಜನಾ ಮಂದಿರದ ಅಧ್ಯಕ್ಷ ರಾಮದಾಸ್ ರೈ ಮದ್ಲ, ಸದಾಶಿವ ಮಣಿಯಾಣಿ, ಲೋಕೇಶ್ ರೈ ಅಮೈ, ತಿಲಕ್ ರೈ ಕುತ್ಯಾಡಿ, ವಿಶ್ವನಾಥ ರೈ ಕುತ್ಯಾಡಿ, ಸಚಿನ್ ರೈ ಪಾಪೆಮಜಲು, ಉಮೇಶ್ ಗೌಡ ಕನ್ನಯ, ಅಪ್ಪಯ್ಯ ನಾಯ್ಕ ಬಪ್ಪಂಡೇಲು, ಕುಂಞರಾಮ ಮಣಿಯಾಣಿ, ದಯಾನಂದ ಗೌಡ ಆಕಾಯಿ, ರಾಜೇಶ್ ರೈ ಕುತ್ಯಾಡಿ ಮತ್ತು ಈಶ್ವರ್ ಪುತ್ತೂರು ಮುಂತಾದವರು ಉಪಸ್ಥಿತರಿದ್ದರು.