ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ಇನ್ನು, ಈ ಸಂಬಂಧ ಮಹತ್ವದ ಆದೇಶ ಹೊರಡಿಸಿರೋ ಹೈಕೋರ್ಟ್, ಎಸಿಬಿ ರದ್ದುಗೊಳಿಸಿ ಮತ್ತೆ ಸ್ವತಂತ್ರವಾಗಿ ಲೋಕಾಯುಕ್ತ ಕಾರ್ಯ ನಿರ್ವಹಿಸಬೇಕು ಎಂದಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಲೋಕಾಯುಕ್ತವನ್ನು ನಿಯಂತ್ರಿಸಲು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರಚಿಸಿತ್ತು.
ಭಾರತದಲ್ಲಿ ಎರಡು ಭ್ರಷ್ಟಾಚಾರ ನಿಗ್ರಹ ಸಂಸ್ಥೆಗಳನ್ನು ಹೊಂದಿರುವ ರಾಜ್ಯ ಕರ್ನಾಟಕ ಮಾತ್ರ ಆಗಿತ್ತು. ಹೀಗಾಗಿ ಎಸಿಬಿಯನ್ನು ಮುಚ್ಚಬೇಕು ಎಂದು ಹಲವರು ಹೈಕೋರ್ಟ್ ಮೆಟ್ಟಿಲೇರಿದ್ದರು.