ವಿಟ್ಲ: ತೆಂಗಿನ ಮರದಿಂದ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿಯೋರ್ವರು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟ ಘಟನೆ ಆ.12 ರಂದು ನಡೆದಿದೆ.
ಉಕ್ಕುಡ ಆಲಂಗಾರ್ ನಿವಾಸಿ ನಾರಾಯಣ ನಾಯ್ಕ್(48) ಮೃತ ವ್ಯಕ್ತಿ.

ನಾರಾಯಣ ನಾಯ್ಕ್ ರವರು ತೆಂಗಿನ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

























