ವಿಟ್ಲ: ಮಿತ್ತನಡ್ಕ ಸರಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ವ್ಯಕ್ತಿಯ ಸ್ಮರಣಾರ್ಥ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಈ ವಿಚಾರ ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
ಕರೋಪಾಡಿ ಗ್ರಾಮದಲ್ಲಿ ಕ್ರಿಮಿನಲ್ ಚಟುವಟಿಕೆ, ದರೋಡೆ, ಗಾಂಜಾ, ರಕ್ತಚಂದನ ಕಳ್ಳತನ, ಪುತ್ತೂರಿನ ರಾಜಧಾನಿ ಜ್ಯುವೆಲರ್ಸ್ ನ ಶೂಟೌಟ್ ಪ್ರಕರಣದಲ್ಲಿಯೂ ಆರೋಪಿಯಾಗಿದ್ದ ಅನ್ವರ್ ಮುಗುಳಿ ಎಂಬಾತನ ಸ್ಮರಣಾರ್ಥ ಮಿತ್ತನಡ್ಕ ಸರಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಕಾರ್ಯಕ್ರಮ ಆಯೋಜನೆ ಮಾಡುವ ಆಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಈ ವಿಚಾರ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಅನ್ವರ್ ಕಳೆದ ವರ್ಷ ಅಪಘಾತದಲ್ಲಿ ಸಾವನ್ನಪ್ಪಿದ್ದು, ಕ್ರಿಮಿನಲ್ ಹಿನ್ನಲೆ ಹೊಂದಿರುವ ಈತನ ಸವಿನೆನಪಿಗಾಗಿ ಸರಕಾರಿ ಶಾಲೆಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿರುವುದು ಎಷ್ಟರ ಮಟ್ಟಿಗೆ ಸರಿ ಎಂಬುದು ಸ್ಥಳೀಯರ ಅಭಿಪ್ರಾಯವಾಗಿದ್ದು, ಈ ರೀತಿಯ ಕಾರ್ಯಕ್ರಮ ಶಾಲೆಯಲ್ಲಿ ನಡೆಯಲು ಅವಕಾಶ ನೀಡಬಾರದು ಎನ್ನುವ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.