ಪುಂಜಾಲಕಟ್ಟೆ: ಎಲ್ಲರು ತಮ್ಮ ಹುಟ್ಟುಹಬ್ಬವನ್ನು ಸ್ನೇಹಿತರು, ಕುಟುಂಬಸ್ಥರೊಂದಿಗೆ ಆಚರಣೆ ಮಾಡಿದ್ರೆ, ಪೊಲೀಸ್ ಅಧಿಕಾರಿಯೊಬ್ಬರು ವಿಶೇಷ ಮಕ್ಕಳೊಂದಿಗೆ ತಮ್ಮ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿಕೊಂಡಿದ್ದಾರೆ.
ಪುಂಜಾಲಕಟ್ಟೆ ಪೊಲೀಸ್ ಠಾಣಾ ಸಬ್ ಇನ್ಸ್ಪೆಕ್ಟರ್ ಸುತೇಶ್ ಕೆ. ಪಿ. ರವರು ತಮ್ಮ ಹುಟ್ಟುಹಬ್ಬವನ್ನು ಉಜಿರೆಯ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದ ವಿಶೇಷ ಮಕ್ಕಳೊಂದಿಗೆ ಆಚರಿಸಿದ್ದಾರೆ.
ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದ ಮಕ್ಕಳೊಂದಿಗೆ ಕೇಕ್ ಕತ್ತರಿಸಿ ಹುಟ್ಟುಹಬ್ಬವನ್ನು ಆಚರಿಸಿದ ಪೊಲೀಸ್ ಅಧಿಕಾರಿಯವರ ಈ ನಡೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ.
ಸುತೇಶ್ ರವರು ಈ ಮೊದಲು ಪುತ್ತೂರು ನಗರ ಠಾಣೆಯಲ್ಲಿ ಠಾಣಾಧಿಕಾರಿ ಕಾರ್ಯ ನಿರ್ವಹಿಸುತ್ತಿದ್ದು, ಜ.7 ರಂದು ಪುತ್ತೂರಿನಿಂದ ಪುಂಜಾಲಕಟ್ಟೆ ಠಾಣೆಗೆ ವರ್ಗಾವಣೆಗೊಂಡು ಕಾರ್ಯ ನಿರ್ವಹಿಸುತ್ತಿದ್ದಾರೆ.