ಬಂಟ್ವಾಳ: 75ನೇ ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ದ ಸಲುವಾಗಿ ಮಾಣಿ ಗ್ರಾಮ ಪಂಚಾಯತ್ ನಲ್ಲಿ ಧ್ವಜಾರೋಹಣ ಕಾರ್ಯಕ್ರಮ ಜರುಗಿತು.

ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ರವರು ಧ್ವಜಾರೋಹಣ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಸಮಾಜ ಸೇವಕಿ ಪ್ರಫುಲ್ಲಾ.ಆರ್.ರೈ, ನಿವೃತ್ತ ಸೈನಿಕ ಜಗನ್ನಾಥ ಶೆಟ್ಟಿ ಮಾಣಿ, ವೈದ್ಯಾಧಿಕಾರಿ ಡಾ.ಶಶಿಕಲಾ ಭಾಗವಹಿಸಿದ್ದರು. ಪ್ರಮುಖರಾದ ರಾಜ್ ಕಮಲ್ ಹೆಗ್ಡೆ ಕೆಳಗಿನಮನೆ, ನಾರಾಯಣ ಆಳ್ವ ಕೊಡಾಜೆ, ಅಬ್ದುಲ್ ಅಝೀಝ್ ಸೂರಿಕುಮೇರು, ಪ್ರಸನ್ನ ಕಾಮತ್ ಕಡೆಕ್ಕಾನ, ಜುಮ್ಮಾ ಮಸೀದಿ ಅಧ್ಯಕ್ಷ ಮೂಸಾ ಕರೀಂ, ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯರಾದ ಮೆಲ್ವಿನ್ ಕಿಶೋರ್ ಮಾರ್ಟಿಸ್, ನಾರಾಯಣ ಶೆಟ್ಟಿ, ರಮಣಿ.ಡಿ.ಪೂಜಾರಿ, ಸೀತಾ, ಸುಜಾತ, ಮಿತ್ರಾಕ್ಷಿ, ಅಭಿವೃದ್ಧಿ ಅಧಿಕಾರಿ ಗಿರಿಜಾ, ಕಾರ್ಯದರ್ಶಿ ಭಾರತಿ.ಪಿ, ಸಿಬ್ಬಂದಿಯವರು ಉಪಸ್ಥಿತರಿದ್ದರು.







 
	    	



























