ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಏ.5 ರಂದು ಬೆಳಿಗ್ಗೆ ಪರಮವೀರ ಚಕ್ರ ಪುರಸ್ಕೃತ ಯೋಧರ ಸಂಸ್ಮರಣೆ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮವು ಕಾಲೇಜಿನ ನೇತಾಜಿ ಸಭಾಭವನದಲ್ಲಿ ನಡೆಯಲಿದೆ.
ರಾಷ್ಟ್ರರಕ್ಷಣೆಯಲ್ಲಿ ಯೋಧರ ಶೌರ್ಯ-ಬಲಿದಾನಗಳ ಸಾಹಸಗಾಥೆಯ ಬಗ್ಗೆ ಸಾಮಾಜಿಕ ಕಾರ್ಯಕರ್ತ ಹಾಗೂ ಉಪನ್ಯಾಸಕ ರಾಜೇಶ್ ಪದ್ಮಾರ್ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ ವಹಿಸಲಿದ್ದಾರೆ. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಮಹೇಶ ನಿಟಿಲಾಪುರ ಈ ಸಂದರ್ಭದಲ್ಲಿ ಉಪಸ್ಥಿತರಿರುತ್ತಾರೆ, ಎಂದು ಪ್ರಾಂಶುಪಾಲ ಮಹೇಶ ನಿಟಿಲಾಪುರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.