ಬೆಳ್ಳಾರೆ: ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರವೀಣ್ ನೆಟ್ಟಾರು ಕೊಲೆಗೆ ಅಸಲಿ ಕಾರಣ ಏನು ಎಂಬ ವಿಚಾರ ಬಯಲಾಗಿದೆ. ಎನ್‌ಐಎ ಅಧಿಕಾರಿಗಳ ತನಿಖೆ ವೇಳೆ ಹಲವು ವಿಚಾರಗಳು ಬೆಳಕಿಗೆ ಬಂದಿದೆ.
ಸ್ಥಳೀಯ ಜನರಲ್ಲಿ ಭಯ ಹುಟ್ಟಿಸುವ ಉದ್ದೇಶದಿಂದ ಈ ಕೃತ್ಯಕ್ಕೆ ಸಂಚು ಹಾಕಲಾಗಿತ್ತು. ಸ್ಥಳೀಯ ಜನರಲ್ಲಿ ಭಯ ಹುಟ್ಟಿಸಲೆಂದೇ ಪ್ರವೀಣ್ ನೆಟ್ಟಾರು ಹತ್ಯೆ ಮಾಡಲಾಗಿತ್ತು ಎನ್ನಲಾಗಿದ್ದು, ಅದೇ ಉದ್ದೇಶದಿಂದ ಪ್ರವೀಣ್ ನೆಟ್ಟಾರು ಕೊಲೆಗೆ ಆರೋಪಿಗಳು ಸಂಚು ರೂಪಿಸಿದ್ದರು ಎಂಬುದು ಎನ್. ಐ. ಎ ತನಿಖೆಯಲ್ಲಿ ಬಯಲಾಗಿದೆ.
ಪ್ರವೀಣ್ ನೆಟ್ಟಾರು ಕೊಲೆಗೆ ಸಂಬಂಧಿಸಿದಂತೆ ಎನ್‌ಐಎ ತನ್ನದೇ ಆದ ಎಫ್‌ಐಆರ್ ದಾಖಲಿಸಿಕೊಂಡಿದೆ.
ನಾಲ್ವರು ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಝಾಕೀರ್, ಮಹಮ್ಮದ್ ಶಫೀಕ್, ಶೇಕ್ ಸದ್ದಾಂ ಮತ್ತು ಅಬ್ದುಲ್ ಹ್ಯಾರಿಸ್ ಮೇಲೆ ಐಪಿಸಿ 120ಬಿ, 302, 34 ಹಾಗೂ ಯುಎಪಿಎ ಕಲಂ 16 ಮತ್ತು18 ರಡಿ ಪ್ರಕರಣ ದಾಖಲಾಗಿದೆ.
ಈಗಾಗಲೇ ಬೆಳ್ಳಾರೆ ಪೊಲೀಸ್ ಠಾಣೆಯ ಕೇಸ್ ಫೈಲ್ ಪಡೆದು ಎನ್‌ಐಎ ತನಿಖೆ ಕೈಗೊಂಡಿದೆ. ಬೆಳ್ಳಾರೆ ಠಾಣೆಯಲ್ಲಿ ದಾಖಲಾದ ಕೇಸ್ ವಿವರಗಳು ಎನ್‌ಐಎ ಎಫ್‌ಐಆರ್ ನಲ್ಲಿ ಉಲ್ಲೇಖಿಸಲಾಗಿದೆ. ಅದರ ಜೊತೆಗೆ ಹತ್ಯೆ ಹಿಂದಿನ ಉದ್ದೇಶ ಏನು ಎಂಬುದು ಉಲ್ಲೇಖಿಸಿದೆ. ತನಿಖಾ ಸಮಯದಲ್ಲಿ ಬೆಳಕಿಗೆ ಬಂದ ವಿಚಾರವನ್ನು ಎನ್‌ಐಎ ಎಫ್‌ಐಆರ್ ನಲ್ಲಿ ಉಲ್ಲೇಖಿಸಲಾಗಿದೆ.

























