ಸುಳ್ಯ: ಮಗು ಹಠ ಮಾಡುತ್ತಿದೆ ಎಂದು ತಾಯಿ ಮಗುವಿಗೆ ಬರೆ ಹಾಕಿದ ಘಟನೆ ಸುಳ್ಯದಲ್ಲಿ ನಡೆದಿದೆ.
ನಾಲ್ಕು ವರ್ಷ ಪ್ರಾಯದ ಮಗುವಿಗೆ ತಾಯಿಯೇ ಸಟ್ಟುಗ ಬಿಸಿ ಮಾಡಿ ಬರೆ ಹಾಕಿದ ದಾರುಣ ಘಟನೆ ಸುಳ್ಯದ ನಾವೂರಿನಿಂದ ವರದಿಯಾಗಿದೆ.
ಈ ಘಟನೆ ಆರು ದಿನಗಳ ಹಿಂದೆ ನಡೆದಿದೆಯೆನ್ನಲಾಗಿದ್ದು, ಸ್ಥಳೀಯರು ನೀಡಿದ ಮಾಹಿತಿಯ ಆಧಾರದಲ್ಲಿ ಸಿ.ಡಿ.ಪಿ.ಒ. ರಶ್ಮಿ ನೆಕ್ರಾಜೆಯವರು ಮನೆಗೆ ತೆರಳಿ ಪರಿಶೀಲಿಸಿದ್ದು, ಬಳಿಕ ಮಗುವನ್ನು ಸಿ.ಡಿ.ಪಿ.ಒ. ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆಂದು ತಿಳಿದು ಬಂದಿದೆ.