ಪುತ್ತೂರು: ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಗಳ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶ್ರೀಕೃಷ್ಣ ಲೀಲೋತ್ಸವ ಕಾರ್ಯಕ್ರಮವು ಆ.19 ರಂದು ವಿದ್ಯಾಸಂಸ್ಥೆಯ ಗೋಪಾಲಕೃಷ್ಣ ಸಭಾಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಸಂಸ್ಕೃತ ವಿದ್ವಾಂಸ ವೇದಮೂರ್ತಿ ಕೇಶವ ಭಟ್ ಕೇಕನಾಜೆ ರವರು ಉದ್ಘಾಟಿಸಲಿದ್ದಾರೆ. ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಗಳ ಅಧ್ಯಕ್ಷ ಶಿಬರ ಜಯರಾಮ ಕೆದಿಲಾಯ
ಸಭಾಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್, ನವೋದಯ ಪ್ರೌಢಶಾಲೆಯ ಪ್ರಬಂಧಕ, ಪೋಷಕ ನಾರಾಯಣ ಬನ್ನಿಂತಾಯ ಪಿ, ಬೆಂಗಳೂರಿನ ಸಿವಿಲ್ ಕಂಟ್ರಾಕ್ಟರ್, ಪೋಷಕ ಮನೋಹರ್ ಬಿ ಭಾಗವಹಿಸಲಿದ್ದಾರೆ.
ವಿದ್ಯಾರ್ಥಿಗಳಿಗೆ, ಪೋಷಕರಿಗೆ, ಶಿಕ್ಷಕರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ. ಮಧ್ಯಾಹ್ನ ವಿಶೇಷ ಭೋಜನದ ವ್ಯವಸ್ಥೆ ಇರಲಿದೆ. ಪೋಷಕರು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿದ್ಯಾಸಂಸ್ಥೆಗಳ ಪ್ರಕಟಣೆ ತಿಳಿಸಿದೆ.
