ಮಂಗಳೂರು: ಸುರತ್ಕಲ್‌ನಲ್ಲಿ ಜು. 28ರಂದು ನಡೆದಿದ್ದ ಮಹಮ್ಮದ್ ಫಾಝಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮತ್ತೋರ್ವ ಆರೋಪಿ ಬಂಟ್ವಾಳದ ಹರ್ಷಿತ್ (28)ನನ್ನು ಬಂಧಿಸಿದ್ದಾರೆ.

ಈತ ಕೊಲೆ ಕೃತ್ಯದ ಅನಂತರ ಆರೋಪಿಗಳನ್ನು ಕಾರಿನಲ್ಲಿ ತನ್ನ ಮನೆಗೆ ಕರೆದುಕೊಂಡು ಹೋಗಿ ಆಶ್ರಯ ನೀಡಿದ್ದ. ಕಾರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಪೊಲೀಸರು ಸುಹಾಸ್ ಶೆಟ್ಟಿ, ಮೋಹನ್, ಅಭಿಷೇಕ್, ಶ್ರೀನಿವಾಸ್, ದೀಕ್ಷಿತ್, ಗಿರಿಧರ್ ಮತ್ತು ಅಜಿತ್ ಕ್ರಾಸ್ತಾನನ್ನು ಬಂಧಿಸಿದ್ದಾರೆ. ಇದೀಗ ಒಟ್ಟು ಬಂಧಿತರ ಸಂಖ್ಯೆ 8ಕ್ಕೇರಿದಂತಾಗಿದೆ.




























