ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಹಂಗಾಮಿ ಅಧ್ಯಕ್ಷರಾಗಿ ಮೊಹಮ್ಮದ್ ಫಾರೂಕ್ ರನ್ನು ನೇಮಕ ಮಾಡಲಾಗಿದೆ.
ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಚುನಾಯಿತ ಅಧ್ಯಕ್ಷರಾದ ಸಿದ್ಧಿಕುಲ್ ಅಕ್ಬರ್ ರವರು ವೈಯಕ್ತಿಕ ಕಾರಣದಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗದ ಹಿನ್ನೆಲೆ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಹಂಗಾಮಿ ಅಧ್ಯಕ್ಷರಾಗಿ ಮೊಹಮ್ಮದ್ ಫಾರೂಕ್ ರನ್ನು ನೇಮಕ ಮಾಡಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಲುಕ್ಮಾನ್ ಬಂಟ್ವಾಳ್ ರವರು ಆದೇಶಿಸಿದ್ದಾರೆ.
