ಸುಳ್ಯ: ಅಜ್ಜಾವರದ ಮೇನಾಲ ವಿವಾದಿತ ಜಾಗದಲ್ಲಿ ಕೃಷ್ಣ ಜನ್ಮಾಷ್ಟಮಿ ಸಮಿತಿಯವರು ವಾಹನ ಪಾರ್ಕಿಂಗ್ ನೆಪದಲ್ಲಿ ಜೆಸಿಬಿ ಮೂಲಕ ಸಮತಟ್ಟು ಮಾಡಲು ಪ್ರಯತ್ನಿಸಿದ್ದು, ಈ ವೇಳೆ ಇದಕ್ಕೆ ದರ್ಗಾ ದವರು ಆಕ್ಷೇಪ ವ್ಯಕ್ತಪಡಿಸಿದ ಘಟನೆ ಆ.18 ರಂದು ಸುಳ್ಯದಲ್ಲಿ ನಡೆದಿದೆ.

ಘಟನೆಯ ವಿಚಾರ ಪೊಲೀಸರ ಗಮನಕ್ಕೆ ಬಂದ ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಕಂದಾಯ ಇಲಾಖೆ ಈ ಜಾಗದ ವಿವಾದ ನ್ಯಾಯಾಲಯದಲ್ಲಿದ್ದು, ಅದರ ತೀರ್ಪು ಬರುವವರೆಗೂ ಯಥಾ ಸ್ಥಿತಿ ಕಾಪಾಡುವಂತೆ ಸೂಚನೆಯನ್ನು ನೀಡಿದ್ದಾರೆ ಎಂದು ತಿಳಿದು ಬಂದಿದೆ.