ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಐವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಕಸ್ಟಡಿಗೆ ಪಡೆದುಕೊಂಡಿದೆ.
ಐದು ಆರೋಪಿಗಳಾದ ರಿಯಾಜ್ (27), ನೌಫಲ್ (28), ಸೈನುಲ್ ಅಬಿದ್ (22), ಮೊಹಮ್ಮದ್ ಸೈಯದ್ (32), ಅಬ್ದುಲ್ ಬಶೀರ್ (29) ರನ್ನು ಎನ್‌ಐಎ ಆರು ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದೆ.
ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ರವರನ್ನು ಜುಲೈ 26 ರಂದು ಹತ್ಯೆ ಮಾಡಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರೋಪಿಗಳನ್ನು ಬಂಧಿಸಲಾಗಿದ್ದು, ಈ ತನಿಖೆಯನ್ನು ಎನ್‌ಐಎ ಕೈಗೆತ್ತಿಕೊಂಡಿದ್ದು, ಗುರುವಾರ ಐದು ಆರೋಪಿಗಳನ್ನು ಆರು ದಿನಗಳ ಕಾಲ ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ.