ಮಂಗಳೂರು: ಸಮುದ್ರದಲ್ಲಿ ಸ್ನಾನಕ್ಕೆಂದು ಇಳಿದ ಯುವಕನೋರ್ವ ನೀರುಪಾಲಾದ ಘಟನೆ ತಣ್ಣೀರು ಬಾವಿ ಕಡಲ ಕಿನಾರೆಯಲ್ಲಿ ನಡೆದಿದೆ.
ನೀರುಪಾಲಾದ ಯುವಕನನ್ನು ತಣ್ಣೀರುಬಾವಿ ನಿವಾಸಿ ಮುಹಮ್ಮದ್ ಕೈಫ್(19) ಎಂದು ಗುರುತಿಸಲಾಗಿದೆ.

ಮುಹಮ್ಮದ್ ಮನೆಯ ಸಮೀಪದ ತಣ್ಣೀರುಬಾವಿ ಕಡಲಿನಲ್ಲಿ ಸ್ನಾನಕ್ಕೆಂದು ತೆರಳಿದ್ದು, ಈ ವೇಳೆ ಸಮುದ್ರದ ಬೃಹತ್ ಅಲೆಗಳ ಹೊಡೆತಕ್ಕೆ ಸಿಲುಕಿ ನೀರು ಪಾಲಾಗಿದ್ದಾರೆ ಎಂದು ತಿಳಿದು ಬಂದಿದೆ.
























