ಪುತ್ತೂರು: ಸ್ವಾತಂತ್ರ್ಯದ ಅಮೃತಮಹೋತ್ಸವದ ಅಂಗವಾಗಿ ಸ್ವಾತಂತ್ರ್ಯದ ಪುನರಪಿ ನೆನಪಿಗಾಗಿ ಪುತ್ತೂರಿನಿಂದ ವಿಟ್ಲ ತನಕ ಪುತ್ತೂರು ಬ್ಲಾಕ್ ಕಾಂಗ್ರೆಸ್ ಹಾಗೂ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಕಾಲ್ನಡಿಗೆ ಜಾಥಾ ಕಾರ್ಯಕ್ರಮ ಆ.22 ರಂದು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಪುತ್ತೂರು ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಬೆಳಿಗ್ಗೆ 9 ಗಂಟೆಗೆ ದರ್ಬೆ ಸರ್ಕಲ್‌ನಲ್ಲಿ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ. ನಿವೃತ್ತ ಪ್ರಾಂಶುಪಾಲರಾದ ಝೇವಿಯರ್ ಡಿಸೋಜ ರವರು ಉದ್ಘಾಟಿಸಲಿದ್ದಾರೆ.
ಮಾಜಿ ಸಚಿರಾದ ವಿನಯಕುಮಾರ್ ಸೊರಕೆ, ರಮಾನಾಥ ರೈ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಭಾಗವಹಿಸಲಿದ್ದಾರೆ. ವಿಟ್ಲದಲ್ಲಿ ನಡೆಯುವ ಸಮಾರೋಪದಲ್ಲಿ ಕೆಪಿಸಿಸಿ ವಕ್ತಾರ ನಿಖಿತ್ ರಾಜ್, ಪುತ್ತೂರು ಕ್ಷೇತ್ರದ ಉಸ್ತುವಾರಿ ರಕ್ಷಿತ್ ಶಿವರಾಮ, ಮಾಜಿ ಸಚಿವ ಅಭಯಚಂದ್ರ ಜೈನ್, ಶಾಸಕ ಯು.ಟಿ.ಖಾದರ್, ಮಾಜಿ ಶಾಸಕರಾದ ಜೆ.ಆರ್. ಲೋಬೋ, ಮೊಯಿದಿನ್ ಬಾವ, ಡಾ.ರಘು, ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

ಜಾಥಾವು ಪುತ್ತೂರು ಮುಖ್ಯ ರಸ್ತೆಯಾಗಿ ಸುಮಾರು 15 ಕಿ.ಮೀ. ನಡೆದು ವಿಟ್ಲ ತಲುಪಲಿದೆ. ಜಾಥಾಕ್ಕೆ ಅಲ್ಲಲ್ಲಿ ಜನರು ಸೇರಿಕೊಳ್ಳಲಿದ್ದಾರೆ. 2 ರಿಂದ 3 ಸಾವಿರ ಮಂದಿ ಸೇರಲಿದ್ದಾರೆ ಎಂದು ಅವರು ತಿಳಿಸಿದರು.
ಸ್ವಾತಂತ್ರ್ಯಪೂರ್ವದಲ್ಲಿ ಯಾರು ಹೋರಾಟ ಮಾಡಿದ್ದಾರೆ..?? ಸ್ವಾತಂತ್ರ್ಯಪೂರ್ವದ ಸಾಕ್ಷರತೆಗಾಗಿ, ಮಹಾತ್ಮಗಾಂಧಿಯ ಅಹಿಂಸಾ ಚಳವಳಿ ಬಗ್ಗೆ, ನೆಹರೂ, ಸುಭಾಶ್ಚಂದ್ರ ಬೋಸ್, ಆಜಾದ್ ಸೇರಿದಂತೆ ಹಲವು ನಾಯಕರನ್ನು ನೆನಪಿಸುವ ಕಾರ್ಯ ಇದಾಗಿದೆ. ಎಂದವರು ಮಾಹಿತಿ ನೀಡಿದರು.
ಪತ್ರಿಕಾಗೋಷ್ಟಿಯಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ್ ಕೆ.ಬಿ., ಜಿಲ್ಲಾ ಕಾಂಗ್ರೆಸ್ ವಕ್ತಾರ ಮಹಮ್ಮದ್ ಬಡಗನ್ನೂರು, ಪುತ್ತೂರು ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ವಿಶ್ವಜಿತ್ ಅಮ್ಮುಂಜ, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾರದಾ ಅರಸ್ ಮೊದಲಾದವರು ಉಪಸ್ಥಿತರಿದ್ದರು.



























