ಬೆಂಗಳೂರು: ಕೆಲಸ ಕೊಡಿಸುವುದಾಗಿ ಬೆಂಗಳೂರಿಗೆ ತಂದು ವೇಶ್ಯವಾಟಿಗೆ ದಂಧೆಗೆ ನೂಕಿದ್ದ ಗ್ಯಾಂಗ್ನ್ನು ಪೊಲೀಸರು ಬಂಧಿಸಿರುವಂತಹ ಘಟನೆ ನಗರದಲ್ಲಿ ನಡೆದಿದೆ.
ಮಂಜುಳ, ಬ್ರಹ್ಮೇಂದ್ರ, ಶಿವಾನಂದ ಸರ್ಕಲ್ ಬಳಿ ಇರುವ ಸಾಯಿ ಲಾಡ್ಜ್ ಮಾಲೀಕ ಸಂತೋಷ್ ಕೂಡ ಬಂಧನ ಮಾಡಲಾಗಿದೆ.

ವೇಶ್ಯಾವಾಟಿಕೆ ಅಡ್ಡ ಮೇಲೆ ದಾಳಿ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ವೇಳೆ ಗ್ಯಾಂಗ್ ರೇಪ್ ಮಾಡಲಾಗಿದೆ ಎಂದು ಯುವತಿ ಹೇಳಿಕೆ ನೀಡಿದ್ದಾಳೆ. ಕಳೆದ ಮೂರು ವರ್ಷಗಳ ಹಿಂದೆ ಮಂಡ್ಯ ಮೂದ ಯುವತಿಯನ್ನು ಪ್ರಿಯಕರನೇ ಬೆಂಗಳೂರಿಗೆ ಕರೆತಂದು ಮಂಜುಳ ಸಂಪರ್ಕಕ್ಕೆ ಬಿಟ್ಟಿದ್ದು, ಮಂಜುಳ ಯುವತಿಯನ್ನು ವೇಶ್ಯಾವಾಟಿಕೆ ಜಾಲಕ್ಕೆ ತಳ್ಳಿದ್ದಾಳೆ. ದಂಧೆಗಾಗಿ ಹೊಟೇಲ್ಗೆ ಕಳುಹಿಸುತ್ತಿದ್ದ ಪಿಂಪ್ಗಳು, ಈ ವೇಳೆ ಹಲವರು ಏಕಕಾಲಕ್ಕೆ ದೌರ್ಜನ್ಯ ಎಸಗಿರುವುದಾಗಿ ಮಾಹಿತಿ ನೀಡಲಾಗಿದೆ.

























