ಭಟ್ಕಳ: ಅಂಗಡಿಯಿಂದ ಬ್ರೆಡ್ ತರಲು ಹೋಗಿದ್ದ ಬಾಲಕನನ್ನು ಕಾರಿನಲ್ಲಿ ಬಂದ ಅಪರಿಚಿತರು ಅಪಹರಿಸಿದ ಘಟನೆ ಭಟ್ಕಳ ತಾಲೂಕಿನ ಆಜಾದ್ ನಗರದಲ್ಲಿ ನಡೆದಿದೆ.
ಕೊಕ್ತಿ ಆಜಾದ ನಗರ ನಿವಾಸಿ ಅಲಿ ಸಾದಾ (8) ಅಪಹರಣಕ್ಕೊಳಗಾದ ಬಾಲಕ.
ಬಾಲಕನ ಅಪಹರಣದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಂಜೆ ವೇಳೆಗೆ ಈ ಕಾರು ಬಾಲಕನ ಮನೆ ಮುಂದೆ ಸಂಚರಿಸುತ್ತಿದ್ದ ದೃಶ್ಯವೂ ದಾಖಲಾಗಿದೆ ಎನ್ನಲಾಗಿದೆ.
ಬಾಲಕನ ತಂದೆ ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ. ಭಟ್ಕಳ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಪಿಐ ದಿವಾಕರ ರವರ ನೇತೃತ್ವದಲ್ಲಿ ಅಪಹರಣಕಾರರ ಪತ್ತೆ ಕಾರ್ಯ ನಡೆಯುತ್ತಿದೆ. ನಗರದ ವಿವಿಧೆಡೆ ಪೊಲೀಸರನ್ನು ನಿಯೋಜಿಸಲಾಗಿದೆ. ಆಸುಪಾಸಿನ ಮನೆಗಳ ಹೊರಗಿನ ಸಿಸಿಟಿವಿ ದೃಶ್ಯಗಳನ್ನು ಸಹ ಪೊಲೀಸರು ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.



























