ಬೆಂಗಳೂರು: ಸಿಎಂ ಬೊಮ್ಮಾಯಿ ಅವರ ಮಾಧ್ಯಮ ಕಾರ್ಯದರ್ಶಿಯಾಗಿ ವರ್ಷದಿಂದ ಸೇವೆ ಸಲ್ಲಿಸುತ್ತಿದ್ದ ಹಿರಿಯ ಪತ್ರಕರ್ತ ಗುರುಲಿಂಗಸ್ವಾಮಿ (45) ರವರು ಹೃದಯಾಘಾತದಿಂದ ನಿಧನರಾದರು.

ಗುರುಲಿಂಗಸ್ವಾಮಿ ಸೋಮವಾರ ಮುಂಜಾನೆ ಜಿಮ್ನಲ್ಲಿ ವ್ಯಾಯಾಮ ಮಾಡುತ್ತಿದ್ದಾಗ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಸಾವನ್ನಪ್ಪಿದ್ದಾರೆ.
ಗುರುಲಿಂಗ ಸ್ವಾಮಿ ಕನ್ನಡದ ಹಲವು ಪತ್ರಿಕೆಗಳಲ್ಲಿ ಮತ್ತು ಸುದ್ದಿವಾಹಿನಿಗಳಲ್ಲಿ ಸೇವೆ ಸಲ್ಲಿಸಿದ್ದರು. ಬೆಂಗಳೂರು ಮತ್ತು ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಹಿರಿಯ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು.


























