ಮಂಗಳೂರು: ಸೆ.2 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲು ರವರು ಶಾಸಕರಾದ ವೇದವ್ಯಾಸ್ ಕಾಮತ್ ಹಾಗೂ ಡಾ.ವೈ ಭರತ್ ಶೆಟ್ಟಿ ರವರೊಂದಿಗೆ ಕೂಳೂರು ಗೋಲ್ಡ್ ಫಿಂಚ್ ಸಿಟಿ ಮೈದಾನಕ್ಕೆ ಭೇಟಿ ನೀಡಿ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿದರು.

ಈ ವೇಳೆ ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರು, ಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.





























