ಪುತ್ತೂರು : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಪ್ರಯುಕ್ತ ದೇವಳದ ಗದ್ದೆ ಸ್ವಚ್ಚತಾ ಕಾರ್ಯವು ಏ.4 ರ ಬೆಳಿಗ್ಗೆ 7ಗಂಟೆ ಯಿಂದ ನಡೆಯಲಿದೆ. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಜೀವಂಧರ ಜೈನ್, ಅಧ್ಯಕ್ಷರು ನಗರಸಭೆ ಪುತ್ತೂರು ಇವರು ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪಿ. ಜಿ ಜಗನ್ನಿವಾಸ್ ರಾವ್, ನಗರ ಸಭಾ ಸದಸ್ಯರು ಕೊಂಬೆಟ್ಟು ವಾರ್ಡ್ ಇವರು ಆಗಮಿಸಲಿದ್ದಾರೆ.
ಈ ಸತ್ಕಾರ್ಯದಲ್ಲಿ ಎಲ್ಲರೂ ಭಾಗಿಯಾಗಬೇಕೆಂದು ಕೇಶವ ಪ್ರಸಾದ್ ಮುಳಿಯ, ಅಧ್ಯಕ್ಷರು ಮತ್ತು ಸರ್ವ ಸದಸ್ಯರು, ವ್ಯವಸ್ಥಾಪನಾ ಸಮಿತಿ, ನವೀನ್ ಕುಮಾರ್ ಭಂಡಾರಿ ಹೆಚ್, ಕಾರ್ಯನಿರ್ವಹಣಾಧಿಕಾರಿ, ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಕಾರ್ಯಕ್ರಮದಲ್ಲಿ ಕೋವಿಡ್ ನಿಯಮಗಳನ್ನು ಶಿಸ್ತುಬದ್ಧವಾಗಿ ಪಾಲಿಸಲಾಗುವುದು ಎಂದಿದ್ದಾರೆ.

ಸ್ವಚ್ಛತಾ ಕಾರ್ಯಕ್ರಮದಲ್ಲಿ ಸಹಭಾಗಿತ್ವ :
