ಸುಬ್ರಹ್ಮಣ್ಯ: ಕಾರು ಮತ್ತು ಓಮ್ನಿ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣ ಎಂಬಲ್ಲಿ ನಡೆದಿದೆ.
ಘಟನೆಯಿಂದಾಗಿ ಏಳು ಮಂದಿ ಗಾಯಗೊಂಡಿದ್ದಾರೆ.

ಬೆಂಗಳೂರು ಮೂಲದ ಕುಟುಂಬವು ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ವೇಳೆ ನೆಟ್ಟಣ ಬಳಿ ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಓಮ್ನಿ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ.
ಅಪಘಾತದಿಂದಾಗಿ ಏಳು ಮಂದಿ ಗಾಯಗೊಂಡಿದ್ದು, ಗಾಯಾಳುಗಳಿಗೆ ಕಡಬ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಓಮ್ನಿ ಕಾರಿನಲ್ಲಿದ್ದ ಪ್ರಯಾಣಿಕರು ಶಿವಮೊಗ್ಗ ಮೂಲದರೆನ್ನಲಾಗಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
























