ಮಂಗಳೂರು: ಸೆ.2 ರಂದು ಪ್ರಧಾನಿ ನರೇಂದ್ರ ಮೋದಿಯವರು ಮಂಗಳೂರಿಗೆ ಆಗಮಿಸುತ್ತಿರುವ ಸಮಯದಲ್ಲಿ ಇದೀಗ ಬದಲಾವಣೆ ಆಗಿದೆ.
ಸೆ.2 ರಂದು ಮಂಗಳೂರಿನಲ್ಲಿ ನಡೆಯುವ ಪ್ರಧಾನಿ ಮೋದಿಯವರ ಕಾರ್ಯಕ್ರಮ ಸಂಜೆ 3 ಗಂಟೆಗೆ ಬದಲು ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ.
ಮಧ್ಯಾಹ್ನ 1 ಗಂಟೆಗೆ ಸರಿಯಾಗಿ ಮಂಗಳೂರಿನ ಗೋಲ್ಡ್ ಪಿಂಚ್ ಮೈದಾನಕ್ಕೆ ಪ್ರಧಾನಿಯವರು ತಲುಪಲಿದ್ದಾರೆ.
ಕರಾವಳಿಯ ಹಲವು ಕಡೆಗಳಲ್ಲಿ ಗಣೇಶೋತ್ಸವದ ಮೆರವಣಿಗೆಗಳು ಇರುವ ಕಾರಣ ಸಾರ್ವಜನಿಕರಿಗೆ ತೊಂದರೆಯಾಗದಂತೆ ಸಮಯ ಬದಲಾವಣೆ ಮಾಡಲಾಗಿದೆ ಎಂದು ವರದಿಯಾಗಿದೆ.

























