ವಿಟ್ಲ: ಸರಕಾರಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೋರಿಗೆ ಡಿಕ್ಕಿಯಾಗಿ ನಿಂತ ಘಟನೆ ವಿಟ್ಲ ಸಮೀಪದ ಉರಿಮಜಲು ಎಂಬಲ್ಲಿ ನಡೆದಿದೆ.

ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಇಂದು ಬೆಳಗ್ಗೆ ಕಾಸರಗೋಡಿನಿಂದ ಪುತ್ತೂರಿಗೆ ಬಂದು ಮರಳಿ ಕಾಸರಗೋಡಿಗೆ
ತೆರಳುತ್ತಿದ್ದ ವೇಳೆ ಉರಿಮಜಲು ಸಮೀಪದ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬಲಬದಿಗೆ ಚಲಿಸಿ ರಸ್ತೆ ಬದಿಯ ಮೋರಿಗೆ ಡಿಕ್ಕಿಯಾಗಿ ನಿಂತಿದೆ.
ಘಟನೆಯಲ್ಲಿ ಪ್ರಯಾಣಿಕರು ಸಣ್ಣ-ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
























