ಪುತ್ತೂರು: ಹಾವೇರಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಅಗ್ನಿವೀರ್ ರ‍್ಯಾಲಿಯಲ್ಲಿ ಪುತ್ತೂರಿನ ವಿದ್ಯಾಮಾತಾ ಅಕಾಡೆಮಿಯಲ್ಲಿ ಒಂದು ತಿಂಗಳು ತರಬೇತಿ ಪಡೆದ 87 ಯುವಕರು ಭಾಗವಹಿಸಲಿದ್ದಾರೆ.
ಅಗ್ನಿವೀರ್ ರ‍್ಯಾಲಿಯಲ್ಲಿ ಪಾಲ್ಗೊಳ್ಳಲು ತೆರಳುತ್ತಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಒಂದು ತಿಂಗಳು ತರಬೇತಿ ಪಡೆದ 87 ಯುವಕರಿಗೆ ಶಾಸಕ ಸಂಜೀವ ಮಠಂದೂರು ರವರು ಉಚಿತ ಬಸ್ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ.

ಹಾಗೆಯೇ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕೇಶವ ಪ್ರಸಾದ್ ಮುಳಿಯ ರವರು ದೇವಸ್ಥಾನದ ವತಿಯಿಂದ ಯುವಕರಿಗೆ ಉಪಹಾರದ ವ್ಯವಸ್ಥೆ ಮಾಡಿದ್ದರು.

ಪುತ್ತೂರು ದೇವಸ್ಥಾನದ ಬಳಿಯಿಂದ ಯುವಕರು ಬಸ್ ಮೂಲಕ ಹಾವೇರಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಅಗ್ನಿವೀರ್ ರ‍್ಯಾಲಿಯಲ್ಲಿ ಪಾಲ್ಗೊಳ್ಳಲು ತೆರಳಿದ್ದಾರೆ.
ಈ ಸಂದರ್ಭದಲ್ಲಿ ವಿದ್ಯಾಮಾತಾ ಅಕಾಡೆಮಿಯ ಭಾಗ್ಯೆಶ್ ರೈ, ನಗರ ಸಭಾ ಸದಸ್ಯ ಪಿ.ಜಿ. ಜಗನ್ನಿವಾಸ್ ರಾವ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

























